ಮೈಸೂರು

ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೋವಿಡ್ 19 ನೆಗೆಟಿವ್ ರಿಪೋರ್ಟ್ ಹೊಂದಿರುವುದು ಸೂಕ್ತ: ಡಿಸಿ ರೋಹಿಣಿ ಸಿಂಧೂರಿ

ಮೈಸೂರು,ಏ.8-ಕೋವಿಡ್ ಪ್ರಕರಣದ ಸಂಖ್ಯೆ ಹೆಚ್ಚುತ್ತಿರುವುದನ್ನು ನಿಯಂತ್ರಿಸುವ ಸಲುವಾಗಿ ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವವರು ಕೋವಿಡ್ 19 ನೆಗೆಟಿವ್ ರಿಪೋರ್ಟ್ (ಕಳೆದ 72 ಗಂಟೆಯೊಳಗಿನ) ಹೊಂದಿರುವುದು ಸೂಕ್ತ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.

ಬೆಂಗಳೂರು ನಗರ ಮತ್ತು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದು ದಿನೇ ದಿನೇ ಹೆಚ್ಚಾಗುತ್ತಿದೆ. ಮೈಸೂರು ಜಿಲ್ಲೆಯಿಂದ ಅನೇಕ ಉದ್ಯೋಗ-ವ್ಯಾಪಾರದ ಉದ್ದೇಶಗಳಿಗಾಗಿ ಪ್ರತಿ ದಿನ ಬೆಂಗಳೂರು ಜಿಲ್ಲೆಯ ಹೋಗಿ ಬರುತ್ತಿರುತ್ತಾರೆ. ಅಲ್ಲದೆ, ಮೈಸೂರು ಜಿಲ್ಲೆಯು ಪ್ರವಾಸಿ ತಾಣಾವಾಗಿರುವುದರಿಂದ ಪ್ರವಾಸಿಗರು ಬೆಂಗಳೂರು ಜಿಲ್ಲೆಯಿಂದ ಮೈಸೂರುಗೆ ಭೇಟಿ ನೀಡುತ್ತಿರುತ್ತಾರೆ. ಇದರಿಂದ ಮೈಸೂರು ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಹರಡುವುದು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವವರು ಕೋವಿಡ್-19 ನೆಗೆಟಿವ್ ರಿಪೋರ್ಟ್ (ಕಳೆದ 72 ಗಂಟೆಯೊಳಗಿನ) ಹೊಂದಿರುವುದು ಸೂಕ್ತ. ಆದ್ದರಿಂದ ಮೇಲ್ಕಂಡ ಸಲಹೆಯನ್ನು ಪಾಲಿಸುವಂತೆ ಹಾಗೂ ಸೋಂಕು ಹರಡುವುದನ್ನು ತಡೆಗಟ್ಟಲು ಸಹಕರಿಸುವಂತೆ ಕೋರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: