ಮೈಸೂರು

ಏಪ್ರಿಲ್ 11 ರಿಂದ ದೇವರಾಜ ಮಾರುಕಟ್ಟೆ ಹೂ ಹಾಗೂ ಚಿಲ್ಲರೆ ಮಾರಾಟ ಮಳಿಗೆ ಜೆ.ಕೆ ಗ್ರೌಂಡ್‍ಗೆ ಸ್ಥಳಾಂತರ

ಮೈಸೂರು,ಏ 8 :- ಮೈಸೂರು ನಗರದಲ್ಲಿ ಕೋವಿಡ್-19 ಪ್ರಕರಣಗಳು ಇತ್ತಿಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹೂ ವ್ಯಾಪಾರಕ್ಕಾಗಿ ದೇವರಾಜ ಮಾರುಕಟ್ಟೆಗೆ ಹೋಗುವ ಕಾರಣ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸಂಭವವಿದ್ದು, ಸಾಮಾಜಿಕ ಅಂತರದ ಉಲ್ಲಂಘನೆ ಆಗುತ್ತದೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ ದೇವರಾಜ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಬೇಕೆಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.
ಬದಲಿ ವ್ಯವಸ್ಥೆಯಾಗಿ ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರಸ್ಥರ ಹಾಗೂ ನಗರದ ಜನತೆಯ ಅನುಕೂಲಕ್ಕಾಗಿ ಆ ಮೂರು ದಿನಗಳ ಕಾಲ ರೈಲ್ವೆ ನಿಲ್ದಾಣದ ಬಳಿ ಇರುವ ಜೀವರಾಯನ ಕಟ್ಟೆ ಮೈದಾನದಲ್ಲಿ(ಜೆ.ಕೆ.ಗ್ರೌಂಡ್) ಹೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: