
ಮೈಸೂರು
ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಆಚರಣೆ
ಮೈಸೂರು,ಏ .08 :- ಜಿಲ್ಲಾಡಳಿತದ ವತಿಯಿಂದ ರಾಷ್ಟ್ರ ನಾಯಕರಾದ ಭಾರತರತ್ನ, ಸಂವಿಧಾನಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಪುರಭವನದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸುವ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.