ಮೈಸೂರು

ನಾಳೆ ವಿದ್ಯುತ್ ವ್ಯತ್ಯಯ

ಮೈಸೂರು,ಏ.8:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ಏಪ್ರಿಲ್ 9 ರಂದು ರಾಮಕೃಷ್ಣನಗರ ಉಪವಿಭಾಗದ 66/11ಕೆ.ವಿ ವಿಜಯಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11ಕೆ.ವಿ ಬರಡನಪುರ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಬರಡನಪುರ, ಮಾವಿನಹಳ್ಳಿ, ಗೋಪಾಲ್‍ ಪುರ, ಮುಳ್ಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: