ಮೈಸೂರು

ನಿವೃತ್ತಿ ಹೊಂದಿ 62ವರ್ಷ ವಯೋಮಿತಿ ಮೀರದ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ನಿಗಮದಲ್ಲಿ ಒಪ್ಪಂದದ ಆಧಾರದ ಮೇಲೆ ನಿಯೋಜನೆ

ಮೈಸೂರು,ಏ.8:- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ಕಳೆದ ಎರಡು ವರ್ಷಗಳಲ್ಲಿ ನಿವೃತ್ತಿ ಹೊಂದಿ 62ವರ್ಷ ವಯೋಮಿತಿ ಮೀರದ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ನಿಗಮದಲ್ಲಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸಲು ಉದ್ದೇಶಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ನಿವೃತ್ತ ನೌಕರರನ್ನು ಅವರು ನಿವೃತ್ತಿ ಹೊಂದಿದ ವಿಭಾಗ ಅಥವಾ ವಾಸಸ್ಥಳಕ್ಕೆ ಹತ್ತಿರದ ವಿಭಾಗಗಳಲ್ಲಿ ನಿಯೋಜಿಸಲಾಗುವುದು. ಷರತ್ತುಗಳನ್ನು ಒಪ್ಪಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ ನಿವೃತ್ತ ಚಾಲನಾ ಸಿಬ್ಬಂದಿಗಳು ತಾವು ನಿವೃತ್ತಿ ಹೊಂದಿದ ವಿಭಾಗದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ದೈಹಿಕವಾಗಿ ಚಾಲನಾ/ನಿರ್ವಾಹಕ ವೃತ್ತಿ ಮಾಡಲು ಸಮರ್ಥರಿರುವ ನಿಗಮದಲ್ಲಿ ನಿಗದಿಪಡಿಸಿರುವ ದೈಹಿಕ /ದೃಷ್ಟಿ ಸಾಮರ್ಥ್ಯ ಪ್ರಮಾಣ ಪತ್ರ/ಕೋವಿಡ್ 19ನೆಗೆಟಿವ್ ವರದಿ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣಪತ್ರ ಪಡೆಯಬೇಕು.

ಪ್ರಸ್ತುತ ಚಾಲ್ತಿಯಲ್ಲಿರುವ ಭಾರೀ ವಾಹನ/ನಿರ್ವಾಹಕ ಪರವಾನಗಿ ಹೊಂದಿರುವುದು ಕಡ್ಡಾಯವಾಗಿರುತ್ತದೆ. ಪ್ರತಿದಿನದ ಕರ್ತವ್ಯಕ್ಕೆ ಚಾಲಕರಿಗೆ 800ರೂ,ಹಾಗೂ ನಿರ್ವಾಹಕರಿಗೆ 700ರೂ.ಗೌರವಧನ ಪಾವತಿಸಲಾಗುವುದು. ವಾರದ ರಜೆ ಹೊರತುಪಡಿಸಿ ಬೇರೆ ಯಾವುದೇ ರಜೆ ಸೌಲಭ್ಯಗಳಿಗೆ ಅರ್ಹರಿರುವುದಿಲ್ಲ. ಒಪ್ಪಂದದ ಅವಧಿಯನ್ನು ಯಾವುದೇ ಹೆಚ್ಚುವರಿ ಆರ್ಥಿಕ/ಸೇವಾ  ಸೌಲಭ್ಯಗಳಿಗೆ ಪರಿಗಣಿಸುವುದಿಲ್ಲ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: