ದೇಶಪ್ರಮುಖ ಸುದ್ದಿ

ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ 37 ವೈದ್ಯರಿಗೆ ಕೊರೋನಾ ಸೋಂಕು

ದೇಶ(ನವದೆಹಲಿ)ಏ.9:-   ದೇಶದಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ 37 ವೈದ್ಯರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಐದು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಪ್ರಮುಖ ನಗರಗಳ ಜತೆ ದೆಹಲಿಯಲ್ಲೂ ಕಳೆದ ಕೆಲವು ವಾರಗಳಿಂದ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಗುರುವಾರ ರಾಜಧಾನಿಯಲ್ಲಿ ಪ್ರಕರಣಗಳ ಸಂಖ್ಯೆ ಈ ವರ್ಷದಲ್ಲಿ ಮೊದಲ ಬಾರಿಗೆ ಏಳು ಸಾವಿರದ ಗಡಿ ದಾಟಿದೆ.

ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಮಂದಿ ಆರೋಗ್ಯ ಕಾರ್ಯಕರ್ತರಿಗೂ ಸೋಂಕಿನ ಭೀತಿ ಎದುರಾಗಿದೆ. ಗಂಗಾರಾಮ್ ಆಸ್ಪತ್ರೆಯಲ್ಲಿ ಸೋಂಕು ತಗುಲಿದ ಬಹುತೇಕ ಮಂದಿ ಯುವವೈದ್ಯರಾಗಿದ್ದು, ಲಸಿಕೆ ಪಡೆದಿದ್ದರು ಎಂದು ಹೇಳಲಾಗಿದೆ. ಇವರ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 37 ವೈದ್ಯರಿಗೆ ಸೋಂಕು ತಗುಲಿದೆ. ಈ ಪೈಕಿ ಬಹುತೇಕ ಮಂದಿಯಲ್ಲಿ ಹೆಚ್ಚಿನ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ. 32 ವೈದ್ಯರು ಮನೆಯಲ್ಲೇ ಪ್ರತ್ಯೇಕವಾಗಿದ್ದು, ಇತರ ಐದು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ  ಎಂದು ಆಸ್ಪತ್ರೆ ಮೂಲಗಳು ಹೇಳಿವೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: