
ಮೈಸೂರು
ಮೈಸೂರು ಜಿಲ್ಲೆಯಲ್ಲಿ 216ಮಂದಿಯಲ್ಲಿ ಕೊರೋನಾ ಸೋಂಕು
ಮೈಸೂರು,ಏ.9:- ಮೈಸೂರು ಜಿಲ್ಲೆಯಲ್ಲಿ ನಿನ್ನೆ 216ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ರೋಗಿಗಳ ಸಂಪರ್ಕ್ಕೆ ಬಂದ 160ಮಂದಿ, ಶೀತಜ್ವರ ಮಾದರಿಯ ಅನಾರೋಗ್ಯ ಲಕ್ಷಣಗಳಿಂದ ಬಳಲುತ್ತಿರುವ 44ಮಂದಿ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 12ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. 92ಮಂದಿ ಗುಣಮುಖರಾಗಿದ್ದಾರೆ.
ಓರ್ವರು ಮೃತಪಟ್ಟಿದ್ದು, ಇದುವರೆಗೆ ಸಾವಿನ ಸಂಖ್ಯೆ 1070ಕ್ಕೇರಿಕೆಯಾಗಿದೆ. (ಕೆ.ಎಸ್,ಎಸ್.ಎಚ್)