ದೇಶಪ್ರಮುಖ ಸುದ್ದಿ

ಆರ್‌ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಜಾಮೀನು ಸಂಬಂಧ ಅರ್ಜಿ ವಿಚಾರಣೆ ಒಂದು ವಾರ ಕಾಲ ಮುಂದೂಡಿಕೆ

ದೇಶ(ರಾಂಚಿ)ಏ.10:- ಜಾರ್ಖಂಡ್ ಹೈಕೋರ್ಟ್ ಜೈಲಿನಲ್ಲಿರುವ ಆರ್‌ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಜಾಮೀನಿಗೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ.

ಈ ಕುರಿತು ಸಿಬಿಐ ತನ್ನ ಉತ್ತರವನ್ನು ಸಲ್ಲಿಸಲು ನ್ಯಾಯಾಲಯಕ್ಕೆ ಸಮಯ ಕೋರಿರುವುದರಿಂದ ಡುಮ್ಕಾ ಖಜಾನೆ ಪ್ರಕರಣದಲ್ಲಿನ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಅವರು ಏ.16ಕ್ಕೆ ಮುಂದೂಡಿದರು.

ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ ತಮ್ಮ ವಾದ ಮಂಡಿಸಿದ ಲಾಲು ಪ್ರಸಾದ್ ಪರ ವಕೀಲರಾದ ಕಪಿಲ್ ಸಿಬಲ್ ‘ರಾಜಕೀಯ ಕಾರಣಗಳಿಗಾಗಿ ನನ್ನ ಕಕ್ಷಿದಾರರನ್ನು ಜೈಲಿನಲ್ಲಿ ಇರಿಸಿಕೊಳ್ಳುವ ಸಲುವಾಗಿ ಸಿಬಿಐ ಉದ್ದೇಶಪೂರ್ವಕವಾಗಿ ಈ ವಿಷಯದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ’ ಎಂದು ಪ್ರತಿಪಾದಿಸಿದರು.
ಹೆಚ್ಚಿನ ಸಮಯ ಕೋರಿ ಸಿಬಿಐ ಪರ ವಕೀಲರು ಮಂಡಿಸಿದ ಮನವಿಯನ್ನು ಅಂಗೀಕರಿಸಿದ ನ್ಯಾಯಾಲಯವು, ಮುಂದಿನ ಮೂರು ದಿನಗಳಲ್ಲಿ ಈ ವಿಷಯದ ಬಗ್ಗೆ ತನಗೆ ಅಫಿಡವಿಟ್ ಸಲ್ಲಿಸಬೇಕೆಂದು ಸೂಚಿಸಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: