ಕರ್ನಾಟಕಪ್ರಮುಖ ಸುದ್ದಿ

ಸಿಎಂ ಬಿಎಸ್ವೈ ಅವರ ಹಡಗು ಮುಳುಗುತ್ತಿದೆ: ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ,ಏ.10-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಯಾಣಿಸುತ್ತಿರುವ ಹಡಗು ಮುಳುಗುತ್ತಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಬಿಎಸ್ವೈ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಿತ್ಯವೂ ಏನು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಗಮನಿಸಿಲ್ಲವೇ? ಮುಖ್ಯಮಂತ್ರಿ ಹಡಗೇ ಮುಳುಗುತ್ತಿದೆ ಎನ್ನುವುದಕ್ಕೆ ಯತ್ನಾಳ್ ಹೇಳಿಕೆಗಳೇ ಸಾಕ್ಷಿಯಾಗಿವೆ ಎಂದರು.

ಯತ್ನಾಳ ಆ ಪಕ್ಷದ ಹಿರಿಯ ಮುಖಂಡ. ಅವರು ಏನು ಹೇಳುತ್ತಿದ್ದಾರೆ ? ಅವರ ಮಾತು ಕೇಳಿದರೆ ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ ಎಂದು ಅನ್ನಿಸೋಲ್ಲವೇ ಎಂದು ಪತ್ರಕರ್ತರಿಗೆ ಮರು ಪ್ರಶ್ನೆ ಹಾಕಿದರು.

ಅಭ್ಯರ್ಥಿ ಮಾಡುವ ಮೂಲಕ ಸತೀಶ ಜಾರಕಿಹೊಳಿ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಂಗಲಾ ಅಂಗಡಿ ಅವರಿಗೆ ಏನು ಮಾಡಿದರು?ಮೊದಲು ಯಾರ ಹೆಸರು ಕೇಳಿಬರುತ್ತಿತ್ತು. ನಂತರ ಏನಾಯ್ತು ? ರವಿ ಯಾವಾಗಲೂ ಸುಳ್ಳನ್ನೆ ಹೇಳುತ್ತಾನೆ. ಅವನ ಹೇಳಿಕೆಗೆ ಉತ್ತರ ಕೊಡುವುದಿಲ್ಲ ಎಂದರು. (ಎಂ.ಎನ್)

Leave a Reply

comments

Related Articles

error: