ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಹಂಪಿ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಗೀತಾ ರಚನೆಕಾರ ವಿ.ನಾಗೇಂದ್ರ ಪ್ರಸಾದ್

ಬೆಂಗಳೂರು,ಏ.10-ಸ್ಯಾಂಡಲ್ ವುಡ್ ನ ಗೀತಾ ರಚನೆಕಾರ, ಸಂಗೀತ ನಿರ್ದೇಶಕ ವಿ.ನಾಗೇಂದ್ರ ಪ್ರಸಾದ್ ಅವರು ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯ ನಾಗೇಂದ್ರ ಪಸಾದ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಸಹಜವಾಗಿ ಚಿತ್ರರಂಗದಲ್ಲಿ ತಾವು ಮಾಡಿದ ಸಾಧನೆ ಅಥವಾ ತಮ್ಮ ಕೊಡುಗೆ ಗುರುತಿಸಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿರುವ ಉದಾಹರಣೆಗಳಿವೆ. ಆದರೆ, ನಾಗೇಂದ್ರ ಪ್ರಸಾದ್ ಅವರು ವಿದ್ಯಾರ್ಥಿಯಂತೆ ಸಂಶೋಧನೆ ನಡೆಸಿ ಮಹಾಪ್ರಬಂಧ ರಚಿಸಿ ಅದಕ್ಕೆ ಪದವಿ ಪಡೆದಿರುವುದು ನಿಜಕ್ಕೂ ಶ್ಲಾಘನೀಯ.

‘ಕನ್ನಡ ಚಲನಚಿತ್ರ ಗೀತೆಗಳ ಸಾಮಾಜಿಕ ಪರಿಣಾಮ: ಒಂದು ಅಧ್ಯಯನ’ ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧಕ್ಕೆ ನಾಗೇಂದ್ರ ಪ್ರಸಾದ್ ಅವರಿಗೆ ಡಾಕ್ಟರೇಟ್ ಪದವಿ ಸಿಕ್ಕಿದೆ. ಇಂದು ಬಳ್ಳಾರಿಯಲ್ಲಿ ನಡೆದ ಹಂಪಿ ಕನ್ನಡ ವಿಶ್ವ ವಿದ್ಯಾಲಯದ 29ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಡಿ.ಲಿಟ್ (ಡಾಕ್ಟರ್ ಆಫ್ ಲಿಟರೇಚರ್) ಪದವಿ ನೀಡಿದೆ.

‘ಕವಿರತ್ನ’ ಎಂದು ಗುರುತಿಸಿಕೊಂಡಿರುವ ವಿ ನಾಗೇಂದ್ರ ಪ್ರಸಾದ್ ಅವರು ಗೀತೆ ರಚನೆ, ಸಂಭಾಷಣೆ ಬರಹಗಾರರಾಗಿ, ಚಲನಚಿತ್ರ ನಿರ್ದೇಶಕರಾಗಿ, ನಟನಾಗಿ ಬಹಳ ವರ್ಷದಿಂದ ಚಿತ್ರರಂಗದಲ್ಲಿದ್ದಾರೆ. ಕನ್ನಡದಲ್ಲಿ ಸಾವಿರಾರು ಅದ್ಭುತ ಹಾಡುಗಳನ್ನು ರಚಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: