ಕ್ರೀಡೆದೇಶಪ್ರಮುಖ ಸುದ್ದಿ

ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವು

ದೇಶ(ಚೆನ್ನೈ)ಏ.12:- ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 10 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ನಿತೀಶ್ ರಾಣಾ ಅವರ 80 ಹಾಗೂ ರಾಹುಲ್ ತ್ರಿಪಾಠಿ ಅವರ ಆಕರ್ಷಕ 53 ರನ್ ಗಳ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 187 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತ್ತು.

ಈ ಗುರಿ ಬೆನ್ನಟ್ಟಿದ್ದ ಸನ್ ರೈಸರ್ಸ್ ಮನೀಶ್ ಪಾಂಡೆ 61 ಹಾಗೂ ಜಾನಿ ಬೆಸ್ಟೊ 55 ರನ್ ಗಳ ಹೊರತಾಗಿ ಐದು ವಿಕೆಟ್ ನಷ್ಟಕ್ಕೆ 177 ರನ್ ಗಳಿಸಲಷ್ಟೇ ಶಕ್ತವಾಯಿತು.

ಸನ್ ರೈಸರ್ಸ್ ಪರ ಮನೀಶ್ ಪಾಂಡೆ 61, ಜಾನಿ ಬೇಸ್ಟೋರ್ವ್ 55, ಅಬ್ದುಲ್ ಸಮದ್ 19 ರನ್ ಗಳಿಸಿದರು. ಕೆಕೆಆರ್ ಪರ ಪ್ರಸಿದ್ಧ ಕೃಷ್ಣ2, ಪ್ಯಾಟ್ ಕಮ್ಮಿನ್ಸ್ ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: