
ಮೈಸೂರು
ಮೈಸೂರಿನಲ್ಲಿಂದು 362 ಕೊರೊನಾ ವೈರಸ್ ಸೋಂಕು ಪತ್ತೆ : 3ಸಾವು
ಮೈಸೂರು,ಏ.12:- ಮೈಸೂರಿನಲ್ಲಿಂದು 362 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 58,573 ಕ್ಕೇರಿಕೆಯಾಗಿದೆ. ಇಂದು 303 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 55,527 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,960 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಂದು 3 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 1,086 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)