ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಸ್ಯಾಂಡಲ್ ವುಡ್ ನ ತಾರಾ ಜೋಡಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಗೆ ಕೋವಿಡ್ ಪಾಸಿಟಿವ್

ಬೆಂಗಳೂರು,ಏ.14-ಸ್ಯಾಂಡಲ್ ವುಡ್ ನ ತಾರಾ ಜೋಡಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ನಟ ಕೃಷ್ಣ ಅವರೇ ಸಾಮಾಜಿಕ ಜಾಲತಾಣ ಟ್ವಿಟ್ವರ್ ಹಾಗೂ ಇನ್ ಸ್ಟಾಗ್ರಾಂ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ. ನನಗೆ ಹಾಗೂ ನನ್ನ ಪತ್ನಿ ಮಿಲನಾ ನಾಗರಾಜ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಇತ್ತೀಚಿಗೆ ಯಾರೆಲ್ಲ ನಮ್ಮ ಸಂಪರ್ಕದಲ್ಲಿದ್ದರೋ ಅವರೆಲ್ಲರೂ ದಯವಿಟ್ಟು ಕರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇನ್ನು ಗೋವಾದಲ್ಲಿ ಡಾರ್ಲಿಂಗ್ ಕೃಷ್ಣ ‘ಶುಗರ್ ಫ್ಯಾಕ್ಟರಿ’ ಸಿನಿಮಾ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ‘ಲವ್ ಮಾಕ್ಟೇಲ್’ ಯಶಸ್ಸಿನ ನಂತರ ‘ಡಾರ್ಲಿಂಗ್’ ಕೃಷ್ಣ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸೋನಲ್‌ ಮಂಥೇರೋ, ಶಿಲ್ಪಾ ಶೆಟ್ಟಿ, ಅದ್ವಿತಿ ಶೆಟ್ಟಿ ಅವರು ಕೃಷ್ಣ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಗೋವಾದಲ್ಲಿ ಅದ್ಧೂರಿಯಾಗಿ ಈ ಚಿತ್ರದ ಶೂಟಿಂಗ್‌ ನಡೆದಿತ್ತು. ದೀಪಕ್ ಅರಸ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 24 ದಿನಗಳ ಕಾಲ ಶೂಟಿಂಗ್ ನಡೆದಿತ್ತು. ಮೂರು ಹಾಡುಗಳು, ಒಂದು ಫೈಟ್ ಹಾಗೂ ಮಾತಿನ‌‌ ಭಾಗದ ಚಿತ್ರೀಕರಣ ನಡೆದಿದೆ. ಸಿನಿಮಾದಲ್ಲಿ ರಂಗಾಯಣ ರಘು, ‘ಲವ್ ಮಾಕ್ಟೇಲ್’ ಖ್ಯಾತಿಯ ಅಭಿ ಕೂಡ ಬಣ್ಣ ಹಚ್ಚಿದ್ದಾರೆ.

ಮಿಲನಾ ನಾಗರಾಜ್ ಫಾರ್ Regn ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ, ಲವ್ ಮಾಕ್ಟೇಲ್ 2 ನಲ್ಲಿ ಇಬ್ಬರು ಬ್ಯುಸಿಯಾಗಿದ್ದಾರೆ. (ಎಂ.ಎನ್)

Leave a Reply

comments

Related Articles

error: