ಕರ್ನಾಟಕಪ್ರಮುಖ ಸುದ್ದಿ

ಎಸ್ಎಸ್ಎಲ್ ಸಿ ಪರೀಕ್ಷೆ: ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ; ಸಚಿವ ಸುರೇಶ್ ಕುಮಾರ್

ಬೆಂಗಳೂರು,ಏ.14-ಸಿಬಿಎಸ್‌ಇನಂತೆ ನಮ್ಮ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಬಿಎಸ್‌ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್‌ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಳದ ಹಿನ್ನೆಲೆ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದರಿಂದ ರಾಜ್ಯದ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿತ್ತು. ಇದಕ್ಕೆ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. (ಎಂ.ಎನ್)

Leave a Reply

comments

Related Articles

error: