ಮೈಸೂರು

ಮುಂದೂಡಿದ್ದ ಕೆ-ಸೆಟ್ ಪರೀಕ್ಷೆ ಏ.25ಕ್ಕೆ

ಮೈಸೂರು,ಏ.16:-  ಏಪ್ರಿಲ್ 11 ರಂದು ನಡೆಯ ಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಮುಂದೂಡಲಾಗಿತ್ತು.  ಈಗ ಪರೀಕ್ಷೆಯನ್ನು  25-04-2021ರಂದು ನಡೆಸಲಾಗುತ್ತದೆ ಎಂಬುದಾಗಿ ಮೈಸೂರು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಮೈಸೂರು ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಎಸ್‌ಇಟಿ)ಯನ್ನು   11-04-2021ರಂದು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ   ಕೆ ಸೆಟ್ 2021 ಪರೀಕ್ಷೆಯನ್ನು   25-04-2021(ಭಾನುವಾರ)ರಂದು ನಡೆಸಲು ತೀರ್ಮಾನಿಸಲಾಗಿರುತ್ತದೆ.
ಕೆಸೆಟ್ 2021ರ ಪರೀಕ್ಷೆಯನ್ನು ನಡೆಸಲು ಪತ್ರದ ಮುಖಾಂತರ ಈಗಾಗಲೇ ಕರ್ನಾಟಕ ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳ ಗಮನಕ್ಕೆ ತರುತ್ತಾ,  ಪರೀಕ್ಷೆಯನ್ನು ಯಶಸ್ವಿಗೊಳಿಸಲು ಕೋರಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

Leave a Reply

comments

Related Articles

error: