ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ 61,695 ಹೊಸ ಪ್ರಕರಣಗಳು ಪತ್ತೆ

ದೇಶ( ಮುಂಬೈ)ಏ.16:- ಮಹಾರಾಷ್ಟ್ರದಲ್ಲಿ 61,695 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 36,39,855 ಕ್ಕೆ ಏರಿಕೆಯಾಗಿದೆ. 349 ಮಂದಿ ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 59,153ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

53,335 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಚೇತರಿಕೆಯಾದವರ ಒಟ್ಟು ಸಂಖ್ಯೆ 29,59,056 ಆಗಿದೆ. ಮಹಾರಾಷ್ಟ್ರದಲ್ಲಿ ಸದ್ಯ 6,20,060 ಸಕ್ರಿಯ ಪ್ರಕರಣಗಳಿವೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಮುಂಬೈಯಲ್ಲಿ 8,209 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,53,404 ಆಗಿದೆ. 50 ಮಂದಿ ಸಾವಿನೊಂದಿಗೆ ಮೃತರ ಒಟ್ಟು ಸಂಖ್ಯೆ 12,197ಕ್ಕೆ ಏರಿಕೆಯಾಗಿದೆ. 2,34,452 ಹೊಸ ಪರೀಕ್ಷೆಯೊಂದಿಗೆ ಈವರೆಗೂ 2, 30,35,652 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಪ್ರಸ್ತುತ 35, 87,478 ಜನರು ಹೋಮ್ ಕ್ವಾರಂಟೈನ್ ನಲ್ಲಿದ್ದರೆ, 27,273 ಜನರು ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆಯಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿನ ಪ್ರಸ್ತುತ ಕೋವಿಡ್-19 ಚೇತರಿಕೆ ಪ್ರಮಾಣ ಶೇ.81.3 ರಷ್ಟಿದೆ. ಮರಣ ಪ್ರಮಾಣ ಶೇ. 1.63 ರಷ್ಟಿದೆ ಎಂದು ಇಲಾಖೆ ಹೇಳಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: