ಮೈಸೂರು

ಬಿಟ್ಟು ಹೋಗುತ್ತೇನೆ ಎಂದಿದ್ದಕ್ಕೆ ಮಹಿಳೆಯನ್ನು ಕೊಲೆಗೈದ ಭೂಪ ಪೊಲೀಸರ ವಶಕ್ಕೆ

ಮೈಸೂರು,ಏ.16:-ಬಿಟ್ಟು ಹೋಗುತ್ತೇನೆ ಎಂದಿದ್ದಕ್ಕೆ ತನ್ನ ಜೊತೆ ವಾಸಿಸುತ್ತಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಮನಸೋ ಇಚ್ಛೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳವಾಡಿಯಲ್ಲಿ ನಿನ್ನೆ ಸಂಜೆ ನಡೆದಿದೆ.

ಹೆಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಪ್ರೀತಿಕುಮಾರಿ(25)ಎಂಬಾಕೆಯೇ ಕೊಲೆಯಾದ ಮಹಿಳೆ. ಈಕೆ ತನ್ನ ಪತಿಯನ್ನು ತೊರೆದು ಅತ್ತೆಯ ಮಗ ಕಿರಣ್ (27) ಎಂಬಾತನ ಜೊತೆ ಬೆಳವಾಡಿಯಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಕಳೆದ ಎಂಟು ತಿಂಗಳಿನಿಂದ ವಾಸವಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಕಿರಣ್ ಪ್ರೀತಿ ಕುಮಾರಿಗೆ ವಿಪರೀತ ಕಿರುಕುಳ ಕೊಡುತ್ತಿದ್ದ. ಇದರಿಂದ ರೋಸಿ ಹೋಗಿದ್ದ ಮಹಿಳೆ ನಿನ್ನನ್ನು ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದು, ಇದನ್ನು ಕೇಳಿ ಕೋಪಗೊಂಡ ಕಿರಣ್ ಮಚ್ಚಿನಿಂದ ತಲೆ, ಹೊಟ್ಟೆ, ಹಾಗೂ ಕೈಗಳಿಗೆ ಹೊಡೆದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಪ್ರೀತಿಕುಮಾರಿಯನ್ನು ಅಕ್ಕಪಕ್ಕದವರು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ವಿಜಯನಗರ ಪೊಲೀಸ್ ಠಾಣೆಯ ಪೊಲೀಸರು ಆರೋಪಿ ಕಿರಣ್ ನನ್ನು ಬಂಧಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: