ಮೈಸೂರು

ಇಂದಿನಿಂದ ಮೇ.15ರವರೆಗೆ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು,ಏ.16:- ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯವು ಕೇಂದ್ರೀಯ ಪುರಾತತ್ವ ಇಲಾಖೆ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಇಲಾಖೆಯ ಆದೇಶದಂತೆ ಕೋವಿಡ್-19 ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣದ ಸಲುವಾಗಿ ದೇವಾಲಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮೇ.15ರವರೆಗೆ ಅಥವಾ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ದೇವಾಲಯದ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಲು ಮತ್ತು ಸಹಕರಿಸಲು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: