ಕರ್ನಾಟಕಪ್ರಮುಖ ಸುದ್ದಿ

ಸಿ ಎಂ ಬಿ.ಎಸ್. ಯಡಿಯೂರಪ್ಪ   ಅವರ ಮೊಮ್ಮಗಳಿಗೂ ಕೊರೊನಾ ವೈರಸ್ ಸೋಂಕು

ರಾಜ್ಯ(ಬೆಂಗಳೂರು)ಏ.17:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಲ್ಲೇ ಅವರ ಮೊಮ್ಮಗಳಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

ಏಪ್ರಿಲ್ 15 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಅವರಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸೌಂದರ್ಯ ಅವರ ಪತಿ ಡಾ. ನಿರಂಜನ್ ಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೂ ನಿನ್ನೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪರ್ಮಿನಾಲಾಜಿಸ್ಟ್ ಸತ್ಯನಾರಾಯಣ ನೇತೃತ್ವದ ವೈದ್ಯರ ತಂಡದಿಂದ ಸಿಎಂ ಬಿಎಸ್ ವೈಗೆ ಚಿಕಿತ್ಸೆ ನೀಡಲಾಗುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: