ಕರ್ನಾಟಕಪ್ರಮುಖ ಸುದ್ದಿ

ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭೆ , ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ

ರಾಜ್ಯ(ಬೆಳಗಾವಿ)ಏ.17:-   ಪ್ರಮುಖ ಪಕ್ಷಗಳ ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಶನಿವಾರ ಬೆಳಿಗ್ಗೆ ಆರಂಭವಾಗಿದೆ.

ಮಸ್ಕಿ ವಿಧಾನಸಭೆ ಚುನಾವಣೆ ಮತದಾನ ಆರಂಭವಾಗಿದ್ದು, 305 ಬೂತ್ ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಕೊರೋನಾ ಕಾರಣದಿಂದಾಗಿ 12 ಗಂಟೆ ಸಮಯ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.ಪ್ರತಾಪ್ ಗೌಡ ಪಾಟೀಲ್, ಬಸನಗೌಡ ತುರುವಿಹಾಳ್ ಪಾಟೀಲ್ ಸೇರಿದಂತೆ 8 ಮಂದಿ ಕಣದಲ್ಲಿದ್ದಾರೆ.

ಬಿಜೆಪಿಯ ಪ್ರತಾಪ್ ಗೌಡ ಮತ್ತು ಕಾಂಗ್ರೆಸ್ ನ ಬಸನಗೌಡ ಪಾಟೀಲ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್ – ಮತ್ತು ಬಿಜೆಪಿ ಎರಡು ಪಕ್ಷಗಳು ಮಸ್ಕಿ ವಿಧಾನಸಭೆ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿವೆ.

ಕೋವಿಡ್-‌19 ಎರಡನೇ ಅಲೆಯ ಆತಂಕದ ನಡುವೆ ಮತದಾರರು ಮಾಸ್ಕ್‌ ಧರಿಸಿ, ಅಂತರ ಕಾಯ್ದುಕೊಂಡು ಮತದಾನ ಮಾಡಿ ಅಭ್ಯರ್ಥಿಗಳ ಭವಿಷ್ಯ ಬರೆಯಲು ಸಜ್ಜಾಗಿದ್ದಾರೆ. ಮೂರು ಕ್ಷೇತ್ರಗಳಲ್ಲೂ ಬೆಳಿಗ್ಗೆ 6.30ರಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: