ಕರ್ನಾಟಕಪ್ರಮುಖ ಸುದ್ದಿ

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 51ನೇ ಘಟಿಕೋತ್ಸವ ಸಮಾರಂಭ ಏ.24ಕ್ಕೆ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 51 ನೇ ಘಟಿಕೋತ್ಸವವನ್ನು ಏಪ್ರಿಲ್ 24 ರಂದು ಬೆಳಿಗ್ಗೆ 11.00 ಗಂಟೆಗೆ ಜಿ.ಕೆ.ವಿ.ಕೆ. ಆವರಣದಲ್ಲಿರುವ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ಏರ್ಪಡಿಸಿದೆ. ಕೃಷಿ ಸಂಶೋಧನೆ ಮತ್ತು ಶಿಕ್ಷಣ ವಿಭಾಗ ಹಾಗೂ ಮಹಾ ನಿರ್ದೇಶಕರು, ಭಾರತೀಯ ಕೃಷಿ ಅನುಸಂಧಾನ ಪರಿಷತ್ತು, ಭಾರತ ಸರ್ಕಾರ, ಕೃಷಿ ಭವನ ನವದೆಹಲಿಯ ಡಾ. ತ್ರಿಲೋಚನ ಮೋಹಪಾತ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಗೌರವಾನ್ವಿತ ರಾಜ್ಯಪಾಲ ವಜುಭಾಯಿ ವಾಲ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದು ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಕೃಷಿ ಸಚಿವರು ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಯದ ಸಹಕುಲಾಧಿಪತಿಗಳು ಆದ ಕೃಷ್ಣ ಬೈರೇಗೌಡ ಅವರು ಘಟಿಕೋತ್ಸವ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: