ಕರ್ನಾಟಕಪ್ರಮುಖ ಸುದ್ದಿ

ಗನ್ ಮ್ಯಾನ್ ಗೆ ಕೊರೊನಾ ಪಾಸಿಟಿವ್: ಕ್ವಾರಂಟೈನ್ ಗೆ ಒಳಗಾದ ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು,ಏ.17- ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್‍ಮ್ಯಾನ್‍ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. (ಎಂ.ಎನ್)

Leave a Reply

comments

Related Articles

error: