ಕರ್ನಾಟಕಪ್ರಮುಖ ಸುದ್ದಿ

ವೈದ್ಯರ ಸಲಹೆಯಂತೆ ಕ್ವಾರಂಟೈನ್ ಗೆ ಒಳಗಾದ ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು,ಏ.17-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ.

ಮುಂಜಾಗ್ರತ ಕ್ರಮವಾಗಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ನಲ್ಲಿರಲು ವೈದ್ಯರು ಸಲಹೆ ನೀಡಿದ್ದಾರೆ. ಅದರಂತೆ ಅವರು ಕ್ವಾರಂಟೈನ್ ಆಗಿದ್ದಾರೆ.

ಕೋವಿಡ್ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಚೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರುಗಳು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ. (ಎಂ.ಎನ್)

Leave a Reply

comments

Related Articles

error: