ಮೈಸೂರು

ಕ್ಷುಲ್ಲಕ ವಿಚಾರಕ್ಕೆ ಗಲಾಟೆ : ದಂಪತಿ ಆತ್ಮಹತ್ಯೆ

ಮೈಸೂರು,ಏ.19:- ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕು ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಚಂದ್ರಶೇಖರ,ಕವಿತಾ ಎಂದು ಗುರುತಿಸಲಾಗಿದೆ.  ಕಳೆದ ಒಂದು  ವರ್ಷದ ಹಿಂದೆ ಇವರು ಮದುವೆಯಾಗಿದ್ದರು. ಸಾಕಷ್ಟು ಅನ್ಯೋನ್ಯವಾಗಿದ್ದರು. ನಿನ್ನೆ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ.  ಇದರಿಂದ ಮನನೊಂದು ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: