ಕರ್ನಾಟಕನಮ್ಮೂರುಪ್ರಮುಖ ಸುದ್ದಿಮೈಸೂರು

ದಸರಾ ಉತ್ಸವ ಉದ್ಘಾಟನೆಗೆ ಆಗಮಿಸಿದ ಸಿಎಂ: ಕಾವೇರಿ ತೀರ್ಪು ಜನಪರವಾಗಿರಲಿದೆ

ಮೈಸೂರಿನಲ್ಲಿ ಅಕ್ಟೋಬರ್ 1ರಿಂದ 11ರವರೆಗೆ ನಡೆಯಲಿರುವ ದಸರಾ ಉತ್ಸವ ಉದ್ಘಾಟನೆ ಚಾಮುಂಡಿ ಬೆಟ್ಟದಲ್ಲಿ ಶನಿವಾರ ನಡೆಯಲಿದ್ದು, ಉತ್ಸವ ಉದ್ಘಾಟನೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ಧರಾಮಯ್ಯ ನಗರಕ್ಕಾಗಮಿಸಲು ಬೆಂಗಳೂರಿನಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಶನಿವಾರ ಬೆಳಿಗ್ಗೆ 10.15ರ ಸುಮಾರಿಗೆ ಆಗಮಿಸಿದರು.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಜನತೆಗೆ ಶುಭಾಶಯ ಕೋರಿದರು. ಈ ಬಾರಿಯೂ ಸಾಂಪ್ರದಾಯಿಕ ದಸರಾಕ್ಕೆ ಚಾಲನೆ ದೊರೆಯಲಿದ್ದು, ಹನ್ನೊಂದು ದಿನಗಳ ಕಾಲ ಯಾವುದೇ ಅಡ್ಡಿ-ಆತಂಕಗಳಾಗದಂತೆ ದಸರಾ ನಡೆಯಲಿದೆ. ಆ ನಿಟ್ಟಿನಲ್ಲಿ ಎಲ್ಲ ವ್ಯವಸ್ಥೆಗಳನ್ನು ನಡೆಸಲಾಗಿದೆ ಎಂದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಷಯದಲ್ಲಿ ನಾನೋಬ್ಬನೆ ನಿರ್ಧಾರ ಮಾಡಲು ಸಾಧ್ಯವಿಲ್ಲ. ಇಂದು ಮಧ್ಯಾಹ್ನ 3 ಗಂಟೆಗೆ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅವರೆಲ್ಲರ ಪ್ರತಿಕ್ರಿಯೆಯನ್ನು ಪರಿಗಣಿಸಿ ಮುಂದಿನ ಹೆಜ್ಜೆಯನ್ನಿಡಲಾಗುವುದು ಎಂದರು.

ವಿಭಾಗೀಯ ಪೀಠ ಬದಲಾವಣೆ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ವಿಭಾಗೀಯ ಪೀಠ ಬದಲಾವಣೆ ಇಲ್ಲ. ಕಾವೇರಿ ತೀರ್ಪು ಜನರ ಪರವಾಗಿಯೇ ಇರತ್ತೆ ಎಂದು ತಿಳಿಸಿದರು. ಈ ಸಂದರ್ಭ ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಂಸದ ಧ್ರುವ ನಾರಾಯಣ, ಮುಡಾ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಮುಖ್ಯಮಂತ್ರಿಗಳ ಜೊತೆಗಿದ್ದರು.

Leave a Reply

comments

Related Articles

error: