ದೇಶಪ್ರಮುಖ ಸುದ್ದಿ

ದೆಹಲಿಯಲ್ಲಿ ಲಾಕ್ ಡೌನ್ ಘೋಷಣೆ: ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ : ಪ್ಲಾಟ್ ಫಾರ್ಮ್ ಟಿಕೇಟ್ ಮಾರಾಟ ಬಂದ್

ದೇಶ(ನವದೆಹಲಿ)ಏ.20:- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂದಿನ ಆರು ದಿನಗಳವರೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ರಾತ್ರಿ 10 ಗಂಟೆಯಿಂದ ಲಾಕ್ ಡೌನ್ ಘೋಷಣೆ ಮಾಡುತ್ತಿದ್ದಂತೆಯೇ ದೆಹಲಿಯ ರೈಲು ನಿಲ್ದಾಣಗಳಲ್ಲಿ ಜನಸಂದಣಿಯನ್ನು ಕಂಡು ಬಂತು.
ಏತನ್ಮಧ್ಯೆ, ದೆಹಲಿಯ ಎಲ್ಲಾ ರೈಲು ನಿಲ್ದಾಣಗಳಲ್ಲಿ ಪ್ಲಾಟ್ ‌ಫಾರ್ಮ್ ಟಿಕೆಟ್ ಮಾರಾಟವನ್ನು ತಕ್ಷಣದಿಂದ ನಿಷೇಧಿಸಿ ಜಾರಿಗೆ ತರಲಾಗಿದೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣದ ಮಧ್ಯೆ ನಿಲ್ದಾಣಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ಭಾರತೀಯ ರೈಲ್ವೆ ಈ ನಿರ್ಧಾರ ತೆಗೆದುಕೊಂಡಿದೆ.
ಅಂದರೆ, ಇದರ ನಂತರ ನವದೆಹಲಿ ನಿಲ್ದಾಣ, ಹಳೆಯ ದೆಹಲಿ ನಿಲ್ದಾಣ, ಹಜರತ್ ನಿಜಾಮುದ್ದೀನ್ ನಿಲ್ದಾಣ, ಆನಂದ್ ವಿಹಾರ್ ಟರ್ಮಿನಲ್ ಮತ್ತು ಇತರ ದೆಹಲಿ ವಿಭಾಗಗಳ ಅಡಿಯಲ್ಲಿ ಬರುವ ನಿಲ್ದಾಣಗಳಲ್ಲಿ ಇನ್ನು ಮುಂದೆ ಪ್ಲಾಟ್ ‌ಫಾರ್ಮ್ ಟಿಕೆಟ್‌ಗಳು ಲಭ್ಯವಿರುವುದಿಲ್ಲ.
ದೆಹಲಿ ವಿಭಾಗಕ್ಕೆ ಬರುವ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪ್ಲಾಟ್ ‌ಫಾರ್ಮ್ ಟಿಕೆಟ್ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಉತ್ತರ ರೈಲ್ವೆಯ ಸಿಪಿಆರ್‌ಒ ದೀಪಕ್ ಕುಮಾರ್ ತಿಳಿಸಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: