ಕರ್ನಾಟಕಪ್ರಮುಖ ಸುದ್ದಿಮೈಸೂರು

ಸನ್ಮಾನ

ಮೈಸೂರು/ಬೆಂಗಳೂರು,ಏ.20:- ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರನ್ನು ಬೆಂಗಳೂರಿನ ಸರ್ಕಾರಿ ಗೃಹ ಕಛೇರಿಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ನೂತನ ನಾಮ ನಿರ್ದೇಶಿತ ಸದಸ್ಯರುಗಳಾದ ಕೆ.ಜೆ. ರಮೇಶ್ ಮತ್ತು ಎಲ್. ಜಗದೀಶ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮೈಸೂರು ನಗರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಜೋಗಿಮಂಜು ಮತ್ತು ಮಾಜಿ ನಗರಪಾಲಿಕೆ ಸದಸ್ಯರಾದ ಹೆಚ್. ಜಯರಾಮ್, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರುಗಳಾದ ಪರಮೇಶ್ ಹಾಗೂ ಕೇಶವ್ ಇದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: