ದೇಶಪ್ರಮುಖ ಸುದ್ದಿ

ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಲಾಕ್ ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ನವದೆಹಲಿ,ಏ.20-ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.

ನಿನ್ನೆಯಷ್ಟೇ ಆದೇಶ ಹೊರಡಿಸಿದ್ದ ಅಲಹಾಬಾದ್ ಹೈಕೋರ್ಟ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಖನೌ, ಅಲಹಾಬಾದ್, ಕಾನ್ಪುರ್, ವಾರಣಾಸಿ ಮತ್ತು ಗೋರಖ್‌ಪುರದಲ್ಲಿ ಲಾಕ್ಡೌನ್ ಜಾರಿಗೆ ಸೂಚನೆ ನೀಡಿತ್ತು.

ಆದರೆ, ಈ ಆದೇಶಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಅಲಹಾಬಾದ್ ಹೈಕೋರ್ಟ್ ಆದೇಶದಿಂದ ಬಡವರು ಮತ್ತು ಜನ ಸಾಮಾನ್ಯರ ಜೀವನಕ್ಕೆ ತೊಂದರೆಯಾಗಲಿದೆ ಎಂದು ಪ್ರತಿಪಾದಿಸಿತ್ತು. ಅಲ್ಲದೆ, ಸರ್ಕಾರ ಪೂರ್ಣ ಪ್ರಮಾಣದ ಲಾಕ್ಡೌನ್ ಮಾಡುವುದಿಲ್ಲ ಎಂದು ಹೇಳಿತ್ತು.  (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: