ದೇಶಪ್ರಮುಖ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಪೋರ್ಚುಗಲ್‌ ಪ್ರವಾಸ ರದ್ದು

ದೇಶ(ನವದೆಹಲಿ)ಏ.21:- ಕೋವಿಡ್-19 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪೋರ್ಚುಗಲ್‌ ಪ್ರವಾಸ ರದ್ದು ಮಾಡಿದ್ದು, ವರ್ಚುವಲ್ ಮೂಲಕ ಭಾರತ ಮತ್ತು ಐರೋಪ್ಯ ಒಕ್ಕೂಟಗಳ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ಮೇ 8ರಂದು ನಡೆಯಲಿರುವ ಭಾರತ ಮತ್ತು ಐರೋಪ್ಯ ಒಕ್ಕೂಟಗಳ ಶೃಂಗಸಭೆಯಲ್ಲಿ ಭಾಗವಹಿಸಲು ಪೋರ್ಚುಗಲ್‌ ಪ್ರವಾಸ ಕೈಗೊಂಡಿದ್ದರು. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಐರೋಪ್ಯ ಒಕ್ಕೂಟ ಮತ್ತು ಪೋರ್ಚುಗೀಸ್ ನಾಯಕತ್ವದೊಂದಿಗೆ ಚರ್ಚಿಸಿ ಮೇ 8 ರಂದು ವರ್ಚುವಲ್ ಮೂಲಕ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಂಗಳವಾರ ವಿದೇಶಾಂಗ ಸಚಿವಾಲಯ ತಿಳಿಸಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: