ದೇಶಪ್ರಮುಖ ಸುದ್ದಿ

ಮೇ 1 ರಿಂದ 18 ರಿಂದ 45 ವರ್ಷದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಿರುವ ಅಸ್ಸಾಂ ಸರ್ಕಾರ

ದೇಶ(ಅಸ್ಸಾಂ),ಏ.22:- ಮೇ 1 ರಿಂದ 18ರಿಂದ 45 ವರ್ಷದ ಎಲ್ಲರಿಗೂ ಉಚಿತವಾಗಿ ಅಸ್ಸಾಂ ಸರ್ಕಾರ ಕೋವಿಡ್ ಲಸಿಕೆ ನೀಡಲಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಕೋವಿಡ್ ನಿರ್ವಹಣೆಗಾಗಿ ಕಳೆದ ವರ್ಷ ಪಡೆದ ದೇಣಿಗೆಗಳನ್ನು ಕೋವಿಡ್ ಲಸಿಕೆ ಖರೀದಿಗಾಗಿ ಬಳಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ 1 ಕೋಟಿ ಡೋಸ್ ಲಸಿಕೆ ಖರೀದಿಸಲು ಈಗಾಗಲೇ ಕೋವಾಕ್ಸಿನ್ ತಯಾರಕ ಭಾರತ್ ಬಯೋಟೆಕ್‌ ಗೆ ಪತ್ರ ಬರೆದಿದೆ ಎಂದು ಶರ್ಮಾ ಹೇಳಿದ್ದಾರೆ.
ಅಸ್ಸಾಂ ಸರ್ಕಾರ 18 ರಿಂದ 45 ವರ್ಷದ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡಲಿದೆ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡುತ್ತಿದೆ ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: