ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 23558 ಕೊರೋನಾ ಸೋಂಕು ಪ್ರಕರಣ ಪತ್ತೆ

ರಾಜ್ಯ( ಬೆಂಗಳೂರು)ಏ.22:- ಕೋವಿಡ್ ಹೆಮ್ಮಾರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೊಸ ದಾಖಲೆ ಬರೆಯುತ್ತಿದೆ. ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 23558 ಜನ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಸೋಂಕಿಗೆ 116 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13762 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 6412 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ 1032233 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಒಟ್ಟು 176188 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಚಿತ ಪಡಿಸಿದೆ. ರಾಜ್ಯ ರಾಜಧಾನಿಯಲ್ಲಿ ಇಂದು 13640 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ನಗರದಲ್ಲಿ 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

Leave a Reply

comments

Related Articles

error: