ಕರ್ನಾಟಕಪ್ರಮುಖ ಸುದ್ದಿ

ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು,ಏ.22- ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ (ಏ.21) ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್​ ಆಗಿದ್ದೇನೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. (ಎಂ.ಎನ್)

 

Leave a Reply

comments

Related Articles

error: