ದೇಶಪ್ರಮುಖ ಸುದ್ದಿ

ಕೊರೋನಾ ಹೆಚ್ಚಳ ಹಿನ್ನೆಲೆ : ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ದೇಶ(ನವದೆಹಲಿ)ಏ.23:- ದೇಶದಲ್ಲಿ ಕೊರೋನಾ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಪ್ರಧಾನಿ ಮೋದಿ ಅವರು ಉನ್ನತ ಮಟ್ಟದ ಸಭೆ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಪ್ರವಾಸ ರದ್ದು ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಏ. 30ರಂದು ಕೊನೆಯ ಹಂತದ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ನಾಳೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಅವರು ತೆರಳಬೇಕಿತ್ತು. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನಕ್ಕೆ ಮೂರು ಲಕ್ಷ ದಾಟುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಿಢೀರ್ ಆಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.
ಪ್ರಧಾನಿ ಮೋದಿ ಅವರು ನಾಳೆ ಉನ್ನತ ಮಟ್ಟದ ಸಭೆಯ ಬಳಿಕ ಎರಡನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಕಳೆದ ಬಾರಿ ಮಾತಿನಲ್ಲಿ ಲಾಕ್​ಡೌನ್​ ಕಡೆಯ ಅಸ್ತ್ರ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇದೀಗ ಸೋಂಕಿನ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕಡೆಯ ಅಸ್ತ್ರ ಪ್ರಯೋಗಕ್ಕೆ ಮುಂದಾಗಲಿದ್ದಾರಾ ಎಂದು ಕಾದುನೋಡಬೇಕಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: