ದೇಶಪ್ರಮುಖ ಸುದ್ದಿಮನರಂಜನೆ

ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಕ್ಕೆ ಬಲಿ

ದೇಶ( ಮುಂಬೈ)ಏ.23:- ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೋನಾಗೆ ಬಲಿಯಾಗಿದ್ದಾರೆ.

ಮೂರು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶ್ರವಣ್ ರಾಥೋಡ್ ಮೃತಪಟ್ಟಿರುವ ವಿಚಾರವನ್ನು ಚಿತ್ರ ನಿರ್ದೇಶಕ ಅನಿಲ್ ಶರ್ಮಾ ತಮ್ಮ ಟ್ವೀಟರ್ ನಲ್ಲಿ ಹಂಚಿಕೊಂಡು ಸಂತಾಪ ಸೂಚಿಸಿದ್ದಾರೆ. 66 ವರ್ಷದ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಅವರು ಮುಂಬೈಯ ಎಸ್ ಎಲ್ ರಹೇಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಶ್ರವಣ್ ರಾಥೋಡ್ ಅವರ ಚೇತರಿಕೆಗಾಗಿ ಪ್ರಾರ್ಥಿಸೋಣ ಎಂದು ಸಂಗೀತ ನಿರ್ದೇಶಕ ನದೀಮ್ ಸೈಫಿ ಇನ್ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.
ನದೀಮ್- ಶ್ರವಣ್ 90ರ ದಶಕದಲ್ಲಿ ಪ್ರಖ್ಯಾತ ಸಂಗೀತ ಸಂಯೋಜಕರು. ಆಶಿಕಿ, ಸಾಜನ್, ರಾಜಾ ಹಿಂದೂಸ್ತಾನಿಯಂತಹ ಹಿಟ್ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: