ಮೈಸೂರು

ಮಾಜಿ ಕಾರ್ಪೋರೇಟರ್‌‌ ಸೋಮಶೇಖರ್ ಕೊರೋನಾಕ್ಕೆ ಬಲಿ

ಮೈಸೂರು,ಏ.23:-   ಕಳೆದ ಒಂದು ವಾರದಿಂದ ಐಸಿಯುನಲ್ಲಿ ಕೋವಿಡ್-19 ಗಾಗಿ  ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕಾರ್ಪೋರೇಟರ್‌‌ ಸೋಮಶೇಖರ್ ನಿಧನರಾಗಿದ್ದಾರೆ.

ಚಾಮರಾಜ ಕ್ಷೇತ್ರ ಜೆಡಿಎಸ್ ಮುಖಂಡ ಸೋಮಶೇಖರ್ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: