ಕರ್ನಾಟಕಪ್ರಮುಖ ಸುದ್ದಿ

ಪಂಚಾಯತ್ ರಾಜ್ ದಿವಸ್ ಆಚರಣೆ: ಬೆಂಗಳೂರು ನಗರ ಜಿಲ್ಲೆಗೆ ಎರಡು ಪ್ರಶಸ್ತಿ ಘೋಷಣೆ

ಬೆಂಗಳೂರು,ಏ.24- ಪಂಚಾಯತ್ ರಾಜ್ ದಿವಸ್ ಆಚರಣೆಯ ಅಂಗವಾಗಿ ಬೆಂಗಳೂರು ನಗರ ಜಿಲ್ಲೆಗೆ ಎರಡು ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯತ್ ಗೆ, ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪಂಚಾಯತ್ ರಾಜ್ ಸಶಕ್ತೀಕರಣ ಪ್ರಶಸ್ತಿ, ಬೆಂಗಳೂರು ಉತ್ತರ ತಾಲ್ಲೂಕಿನ ರಾಜಾನಕುಂಟೆ ಗ್ರಾಮ ಪಂಚಾಯತ್ ಗೆ ಗ್ರಾಮಪಂಚಾಯತ್ ಅಭಿವೃದ್ಧಿ ಯೋಜನೆ (ಜಿಪಿಡಿಪಿ) ಸಿದ್ಧತೆ ಹಾಗೂ ಅನುಷ್ಠಾನ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್ ತಿಳಿಸಿದ್ದಾರೆ.

ಪಂಚಾಯತ್ ರಾಜ್ ದಿವಸ್ ಆಚರಣೆಯ ಅಂಗವಾಗಿ ಇಂದು ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ವರ್ಚುಯಲ್ ಸಭೆಯಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: