
ಕರ್ನಾಟಕಪ್ರಮುಖ ಸುದ್ದಿ
ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ರಾಜ್ಯ( ಬೆಂಗಳೂರು)ಏ.26:- ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ ಪರೀಕ್ಷೆ ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆ ತೆಗೆದುಕೊಳ್ಳುವ ನಿರ್ಧಾರ ಮಾಡಲಾಗಿದೆ.
ವಿದ್ಯಾರ್ಥಿಗಳ ಹಿತ ಕಾಯುವುದಕ್ಕೆ ಸರ್ಕಾರ ಬದ್ದ ಎಂದು ಆದೇಶದಲ್ಲಿ ಹೇಳಲಾಗಿದೆ.