ಮೈಸೂರು

ಕೆ.ಆರ್.ಆಸ್ಪತ್ರೆ ಅಧಿಕಾರಿಗಳಿಂದ ಸ್ಪಂದನೆ ಸಿಗುತ್ತಿಲ್ಲ ದೂರು; ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ನಾಗೇಂದ್ರ

ಮೈಸೂರು,ಏ.26:-   ಕೋವಿಡ್‌ ಸೋಂಕಿತರ ಸೂಕ್ತ ಚಿಕಿತ್ಸೆಗೆ ಕೆ.ಆರ್.ಆಸ್ಪತ್ರೆ ಅಧಿಕಾರಿಗಳಿಂದ ಸ್ಪಂದನೆ ಸಿಗುತ್ತಿಲ್ಲ ಎಂದು ದೂರುಗಳು ಬರುತ್ತಿವೆ. ಈ ಬಗ್ಗೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಶಾಸಕ ಎಲ್.‌ನಾಗೇಂದ್ರ ಹೇಳಿದರು.

ಸೋಮವಾರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್‌.ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಆರೋಪಗಳು ಕೇಳಿ ಬರುತ್ತಿವೆ. ಅಧಿಕಾರಿಗಳಿಗೆ ಒಮ್ಮೆ ಎಚ್ಚರಿಕೆಯನ್ನೂ ನೀಡಲಾಗಿತ್ತು. ಈಗ ಮತ್ತೊಮ್ಮೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್‌ ರೋಗಿಗಳಿಗೆ ಬೆಡ್‌ ವ್ಯವಸ್ಥೆ ಕಲ್ಪಿಸುವ ಸಂಬಂಧ ಈಗಾಗಲೇ ಸಚಿವ ಸುಧಾಕರ್‌ ಅವರೊಂದಿಗೆ ಮಾತನಾಡಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲೇ 500 ಬೆಡ್‌ ವ್ಯವಸ್ಥೆ ಮಾಡಬಹುದು. ಈ ಬಗ್ಗೆ ಮತ್ತೊಮ್ಮೆ ಅವರ ಗಮನಕ್ಕೆ ತರಲಾಗುವುದು ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: