ಮೈಸೂರು

ಬಂಧನದಲ್ಲಿರುವ ಪತ್ರಕರ್ತನ ಬಿಡುಗಡೆಗೆ ಒತ್ತಾಯಿಸಿ ಮನವಿ

ಮೈಸೂರು, ಏ.26:- ಉತ್ತರಪ್ರದೇಶದ ಮಥುರಾ ಜೈಲಿನಲ್ಲಿ ಅಕ್ರಮವಾಗಿ ಬಂಧಿಸಿಟ್ಟಿರುವ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಅಲ್ಲಿನ ಮುಖ್ಯಮಂತ್ರಿಯವರನ್ನು ಆಗ್ರಹಿಸಿ ಮೈಸೂರು ಅಪರ ಜಿಲ್ಲಾಧಿಕಾರಿ ಗಳಿಗೆ  ಜಿಲ್ಲಾ ಪತ್ರಕರ್ತರ ಸಂಘದ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್. ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಎಂ, ನಗರ ಕಾರ್ಯದರ್ಶಿ ರಂಗಸ್ವಾಮಿ. ಪಿ, ಕಾರ್ಯಕಾರಿ ಸಮಿತಿ ಸದಸ್ಯ ರಂಗಸ್ವಾಮಿ ಮಾದಾಪುರ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: