ಕರ್ನಾಟಕಪ್ರಮುಖ ಸುದ್ದಿ

ಚಿತ್ರದುರ್ಗದಲ್ಲಿ ಟಾಟಾ ಏಸ್ ಪಲ್ಟಿ: ಮೂವರ ಸಾವು; 9 ಜನರ ಸ್ಥಿತಿ ಗಂಭೀರ

ಚಿತ್ರದುರ್ಗ,ಏ.26-ಟಾಟಾ ಏಸ್ ಪಲ್ಟಿಯಾಗಿ 6 ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ನೂರಮೂರು ಕ್ರಾಸ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಹಿರಿಯೂರಿನ ವೇದಾವತಿ ನಗರದ ತಮಿಳು ಕಾಲನಿಯ ಸೆಲ್ವಿ (35), ದೀಪಿಕಾ(6) ಮತ್ತು ನೀಲಮ್ಮ(29) ಮೃತಪಟ್ಟಿದ್ದಾರೆ.

ಹತ್ತಕ್ಕೂ ಹೆಚ್ಚು ಕಾರ್ಮಿಕರನ್ನು ಹಿರಿಯೂರಿನಿಂದ ಚಳ್ಳಕೆರೆಗೆ ಕಾಂಕ್ರಿಟ್ ಕೆಲಸಕ್ಕಾಗಿ ಟಾಟಾ ಏಸ್​ನಲ್ಲಿ ಕರೆದೊಯ್ಯಲಾಗುತ್ತಿತ್ತು. ನೂರಮೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ. 9 ಜನರ ಸ್ಥಿತಿ ಗಂಭೀರವಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಎಂ.ಎನ್)

 

Leave a Reply

comments

Related Articles

error: