ಮೈಸೂರು

ಕೊರೋನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಸಭೆ

ಮೈಸೂರು,ಏ.27:- ಕೊರೋನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ನಗರದ ಜಿ.ಪಂ ಸಭಾಂಗಣದಲ್ಲಿ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಟಿ.ನರಸೀಪುರ, ನಂಜನಗೂಡು, ವರುಣ ವಿಧಾನಸಭಾ ಕ್ಷೇತ್ರಗಳ ಕೊರೋನಾ ಸ್ಥಿತಿಗತಿಗಳ ಬಗ್ಗೆ  ಅವಲೋಕನ ನಡೆಸಲಾಗಿದ್ದು, ಸಭೆಯಲ್ಲಿ ಶಾಸಕರುಗಳಾದ ಹರ್ಷವರ್ಧನ್, ಡಾ.ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿ.ಪಂ ಅಧ್ಯಕ್ಷೆ ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ರಾಜೀವ್ ಮತ್ತಿತರರು ಭಾಗಿಯಾಗಿದ್ದಾರೆ.

ಮೂರು ಕ್ಷೇತ್ರಗಳ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಮೂರು ಕ್ಷೇತ್ರಗಳ ಕೊರೋನಾ ಮುಂಜಾಗ್ರತೆ, ಆರೋಗ್ಯ ಸ್ಥಿತಿಗತಿ ಗಳ ಬಗ್ಗೆ ಚರ್ಚೆ ನಡೆಯುತ್ತಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: