ಕರ್ನಾಟಕಪ್ರಮುಖ ಸುದ್ದಿ

ಆಸ್ಪತ್ರೆಗೆ ದಾಖಲಾದ 2-3 ದಿನಕ್ಕೆ ಸೋಂಕಿತರು ಸಾಯುತ್ತಿದ್ದಾರೆ, ಆಸ್ಪತ್ರೆಗಳಲ್ಲಿ ಪಾರದರ್ಶಕತೆ ಇರಲಿ: ನಟ ಜಗ್ಗೇಶ್

ಬೆಂಗಳೂರು,ಏ.27-ರಾಜ್ಯದಲ್ಲಿ ಕೋವಿಡ್ ನಿಂದ ದಿನಕ್ಕೆ ನೂರಾರು ಜನ ಸಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಶ್ನಿಸಿರುವುದರ ಜೊತೆಗೆ ಆಸ್ಪತ್ರೆಗಳಲ್ಲಿ ಪಾರದರ್ಶಕತೆ ಇರಲಿ ಎಂದು ಸಲಹೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾದ 2-3 ದಿನಕ್ಕೆ ಸಾಯುತ್ತಿದ್ದಾರೆ. (ಸ್ವಂತ ಅನುಭವ) ಯಾವ ಚಿಕಿತ್ಸೆ ನೀಡುತ್ತಾರೆ ಎಂಬುದು ಬಂಧುಗಳಿಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ. ಸತ್ತವರ ಮುಖಸಹಿತ ನೋಡಲಾಗದು. ಬೆರಳೆಣಿಕೆಯಷ್ಟು ಕೆಲ ಸಿಬ್ಬಂದಿ ಹೊರತುಪಡಿಸಿ ತಜ್ಞರು ರೋಗಿಯ ಬಗ್ಗೆ ಮಾಹಿತಿ ಪಡೆಯಲು ಸಿಗುವುದಿಲ್ಲ. ಪ್ರತಿ ರೋಗಿಯ ಮನೆಯವರಿಗೆ ದೂರದಿಂದ ನೋಡಲು ಅವಕಾಶ ಮಾಡಕೊಡಬೇಕು. ಇಲ್ಲದಿದ್ದರೆ ಒಳಗೆ ನಡೆಯುವ ವಿಷಯ ಹೊರಗೆ ಅರಿವಾಗುವುದಿಲ್ಲ.

ಸೋಂಕಿತರನ್ನು ದಾಖಲು ಮಾಡಿಕೊಂಡ ನಂತರ ಯಾವ ವಿಷಯ ಹೊರಗೆ ತಿಳಿಸದೆ ರೋಗಿಯ ಸಾವಿನ ಜೊತೆ ಮನೆಯವರು ಸಾಯುವಂತೆ ಭಯ ನೀಡುತ್ತಾರೆ. ಈ ಬಗ್ಗೆ ಅರಿವಿರದವರು ಸರ್ಕಾರದ ಕಾರ್ಯ ಶ್ರಮವನ್ನು ದೂಷಣೆ ಮಾಡಿ ಸತ್ಯ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ದಯಮಾಡಿ ರೋಗಿಯ ಮಾನಿಟರ್ ಡಾಕ್ಟರ್ ಹಾಗೂ ಬಂಧುಗಳಿಗೆ ತಿಳಿಯುವಂತೆ ಆಸ್ಪತ್ರೆಗಳಲ್ಲಿ ಪಾರದರ್ಶಕ ವ್ಯವಸ್ಥೆ ಆಗಲಿ ಎಂದು ಯಡಿಯೂರಪ್ಪ ಅವರಿಗೆ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ. (ಎಂ.ಎನ್)

 

Leave a Reply

comments

Related Articles

error: