ಕರ್ನಾಟಕಪ್ರಮುಖ ಸುದ್ದಿಮನರಂಜನೆ

ನಟ ಕೋಮಲ್ ಗೆ ಕೊರೋನಾ ಸೋಂಕು : ರಾಯರ ಮೊರೆ ಹೋದ ನವರಸ ನಾಯಕ

ರಾಜ್ಯ(ಬೆಂಗಳೂರು)ಏ.28:- ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಮಾಡಲಾಗಿದ್ದು ತಮ್ಮನನ್ನು ಉಳಿಸಿಕೊಡಿ ಎಂದು ನವರಸ ನಾಯಕ ಜಗ್ಗೇಶ್ ರಾಯರ ಪಾದಕ್ಕೆ ಮೊರೆ ಹೋಗಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ “ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ ಸೀರಿಯಸ್ ಆಗಿಬಿಟ್ಟ. ನಾನು ಇಷ್ಟುದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ
ಮಾತ್ರ ಗೊತ್ತು! ಭಕ್ತನ ಗುರುಗಳ ನಡುವೆ ನಡೆದಿತ್ತು. ಭಾವನಾತ್ಮಕ ಭಕ್ತಿಯ ಬೇಡಿಕೆ!ಅದು ಒಂದೆ ರಾಯರೆ ನಾನು ಕಾಯವಾಚಮನಸಾ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ,ಯಾರಿಗೂ ಕೇಡುಬಯಸದೆ ಮೋಸವಂಚನೆ ಅನ್ಯಾಯಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆತಾಯಿಯನ್ನು ನೋಹಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ,
ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕಮಾಡುವ ಎಲ್ಲಾಕ್ಷೇತ್ರದಲ್ಲು ಪ್ರಾಮಾಣಿಕನಾಗಿದ್ದರೆ,ರಾಯರು ನನ್ನಹೃದಯಲ್ಲಿದ್ದರೆ ಸಾವಿನಮನೆ ಕದತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು!ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು!ಕೋಮಲ್ ಈಸ್ ಸೇಫ್ ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯೆವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ!ಆದರೆ ಇತ್ತೀಚೆಗೆ ತನಗೆ ಬರಬೇಕಾದ ಬಿಲ್ ಗೆಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು!ಅದ ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ ಸೀರಿಯಸ್ ಆಗಿಬಿಟ್ಟ!ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!ಅವನಿಗೆ ಸಹಾಯಮಾಡಿದ ಡಾ: ಮಧುಮತಿ,ನಾದನಿ ಡಾ ಲಲಿತ ನರ್ಸಗಳ ಪಾದಕ್ಕೆ ನನ್ನ ನಮನ,
ರಾಯರೆ ಎಂದು ಸರಣಿ ಟ್ವೀಟ್ ಮೂಲಕ ದುಃಖ ಹೊರ ಹಾಕಿದ್ದಾರೆ.

Leave a Reply

comments

Related Articles

error: