ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರ ಥಾಣೆಯ ಮುಂಬ್ರಾದಲ್ಲಿ  ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಶಿಫ್ಟ್ ವೇಳೆ 4ಮಂದಿ ಸಾವು

ದೇಶ(ಮುಂಬೈ)ಏ.28:- ಮಹಾರಾಷ್ಟ್ರದ ಥಾಣೆ ಮುಂಬ್ರಾದ ಪ್ರೈಮ್ ಕ್ರಿಟಿಕಲ್ ಕೇರ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಜನರನ್ನು ಸ್ಥಳಾಂತರಿಸುವ ವೇಳೆ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮುಂಜಾನೆ 3.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಉಳಿದ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಥಾಣೆ ಮಹಾನಗರ ಪಾಲಿಕಾ ಮಾತನಾಡಿ, “ಇಂದು ಮುಂಜಾನೆ 3: 40 ರ ಸುಮಾರಿಗೆ ಥಾಣೆ ಮುಂಬ್ರಾದ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ಮತ್ತು ಪಾರುಗಾಣಿಕಾ ವಾಹನ ಸ್ಥಳದಲ್ಲೇ ಇವೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: