ಕರ್ನಾಟಕಪ್ರಮುಖ ಸುದ್ದಿ

ಕೊರೊನಾ ವೈರಸ್ ಗೆ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಬಲಿ

ಬೆಂಗಳೂರು,ಏ.28-ಮಹಾಮಾರಿ ಕೊರೊನಾ ವೈರಸ್ ಗೆ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ, ನೃತ್ಯ ಗುರು ರಾಮು ಕಣಗಾಲ್ ಬಲಿಯಾಗಿದ್ದಾರೆ.

ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ ಅವರ ಆರೋಗ್ಯ ಕಳೆದ ಕೆಲವು ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರಾಮು ಕಣಗಾಲ್ ನಿಧನರಾಗಿದ್ದಾರೆ.

ಪುಟ್ಟಣ್ಣ ಕಣಗಾಲ್-ನಾಗಲಕ್ಷ್ಮಿ ದಂಪತಿಗಳ ಐವರು ಮಕ್ಕಳಲ್ಲಿ ರಾಮು ಕಣಗಾಲ್ ಕೂಡ ಒಬ್ಬರು. ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದಿದ್ದ ರಾಮು ಕಣಗಾಲ್ ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ‘ಕಣಗಾಲ್ ನೃತ್ಯಾಲಯ’ ಹೆಸರಿನಲ್ಲಿ ನಾಟ್ಯ ಶಾಲೆ ನಡೆಸುತ್ತಿದ್ದರು. ನೃತ್ಯ ಗುರುವಾಗಿ ಅಪಾರ ಶಿಷ್ಯವೃಂದವನ್ನು ಹೊಂದಿದ್ದರು.

ರಾಮು ಕಣಗಾಲ್ ತಮ್ಮ ವಿದ್ಯಾಭ್ಯಾಸವನ್ನು ಚೆನ್ನೈ ಮುಗಿಸಿದ್ದು, ನಂತರ ಬೆಂಗಳೂರಿನಲ್ಲಿ ಕಣಗಾಲ್ ನೃತ್ಯಾಲಯ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು. ಈ ಹಿಂದೆ ರಾಮು ಅವರು, ಪುಟ್ಟಣ್ಣ ಹೆಸರಿನಲ್ಲಿ ನೀಡುವ ಪ್ರಶಸ್ತಿ ನೀಡುವ ಸಮಾರಂಭಕ್ಕೆ ಸೌಜನ್ಯಕ್ಕೂ ನಮ್ಮ ಕುಟುಂಬಕ್ಕೆ ಆಹ್ವಾನ ನೀಡಲ್ಲ ಎಂದು ಚಿತ್ರರಂಗದ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. (ಎಂ.ಎನ್)

Leave a Reply

comments

Related Articles

error: