ದೇಶಪ್ರಮುಖ ಸುದ್ದಿ

ಪೊಲೀಸರ ಗುಂಡಿಗೆ ಇಬ್ಬರು ನಕ್ಸಲರು ಹತ

ನಾಗಪುರ,ಏ.28-ಮಹಾರಾಷ್ಟ್ರದಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಬಲಿಯಾಗಿದ್ದಾರೆ.

ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯ ಜಾಂಬಿಯಾ ಗಟ್ಟಾ ಅರಣ್ಯದಲ್ಲಿ ಸಿ-60 ಕಮಾಂಡೋಗಳು ಮತ್ತು ಗಡ್‌ಚಿರೋಲಿ ಪೊಲೀಸರ ನಡುವೆ ಇಂದು ಬೆಳಿಗ್ಗೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: