ಕರ್ನಾಟಕಪ್ರಮುಖ ಸುದ್ದಿ

ಲಾಕ್‌ಡೌನ್‌ ಘೋಷಣೆ ಹಿನ್ನೆಲೆ ಗಾರ್ಮೆಂಟ್ಸ್‌ ಫ್ಯಾಕ್ಟರಿಗಳಿಗೆ ವಿಧಿಸಿದ್ದ ನಿರ್ಬಂಧ ಸಡಿಲಗೊಳಿಸಿದ ಸರ್ಕಾರ

ರಾಜ್ಯ(ಬೆಂಗಳೂರು)ಏ.29:- ಸರ್ಕಾರ ಗಾರ್ಮೆಂಟ್ಸ್‌ ಫ್ಯಾಕ್ಟರಿಗಳಿಗೆ ಕೊರೊನಾ ಲಾಕ್‌ಡೌನ್‌ ಘೋಷಣೆ ಹಿನ್ನೆಲೆಯಲ್ಲಿ ಹೇರಿದ್ದ ನಿರ್ಬಂಧವನ್ನು ಸಡಿಲಗೊಳಿಸಿದ್ದು, ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ.

ಕೊರೊನಾ ಲಾಕ್‌ಡೌನ್‌ ಮಾರ್ಗಸೂಚಿಯಲ್ಲಿ ಉಳಿದ ಕಾರ್ಖಾನೆಗಳಿಗೆ ಕೊರೊನಾ ನಿಯಮ ಪಾಲಿಸಿ ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಉತ್ಪಾದನಾ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಿದ್ದ ರಾಜ್ಯ ಸರ್ಕಾರ ಗಾರ್ಮೆಂಟ್‌ ಫ್ಯಾಕ್ಟರಿಗಳನ್ನು ಸಂಪೂರ್ಣವಾಗಿ ಬಂದ್‌ ಮಾಡುವಂತೆ ಆದೇಶಿಸಿತ್ತು.

ಗಾರ್ಮೆಂಟ್‌ ಫ್ಯಾಕ್ಟರಿ ಅಸೋಷಿಯೇಷನ್‌ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು, ಸಂಪೂರ್ಣ ಬಂದ ಮಾಡುವುದರಿಂದ ಗಾರ್ಮೆಂಟ್‌ ಉದ್ಯಮ ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ. ಅಲ್ಲದೇ ಇಲ್ಲಿನ ಉದ್ಯೋಗಿಗಳ ಜೀವನ ನಿರ್ವಹಣೆ ಕಷ್ಟವಾಗಲಿದೆ. ಹೀಗಾಗಿ ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರು. ಅವರ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶೇ 50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕೊರೊನಾ ನಿಯಮವನ್ನು ಪಾಲಿಸಿ ಗಾರ್ಮೆಂಟ್‌ ಚಟುವಟಿಕೆ ನಡೆಸುವಂತೆ ಆದೇಶದಲ್ಲಿ ಸೂಚಿಸಿದೆ. ಗಾರ್ಮೆಂಟ್‌ ಕೆಲಸಕ್ಕೆ ಹಾಜರಾಗುವ ಕಾರ್ಮಿಕರಿಗೆ ಸಂಬಂಧ ಪಟ್ಟ ಫ್ಯಾಕ್ಟರಿಯಿಂದ ಪಾಸ್‌ ನೀಡುವಂತೆ ಸೂಚಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: