ಕ್ರೀಡೆಪ್ರಮುಖ ಸುದ್ದಿ

ಐಸಿಸಿ ಟ್ವೆಂಟಿ-20 ಬ್ಯಾಟ್ಸ್‌ ಮನ್‌ ಗಳ ರ‍್ಯಾಂಕಿಂಗ್‌ : ಐದನೇ ಸ್ಥಾನದಲ್ಲಿ ವಿರಾಟ್ ಕೊಯ್ಲಿ

ವಿದೇಶ(ದುಬೈ),ಏ.29 :-  ಐಸಿಸಿ ಟ್ವೆಂಟಿ-20 ಬ್ಯಾಟ್ಸ್‌ ಮನ್‌ ಗಳ ರ‍್ಯಾಂಕಿಂಗ್‌ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆರಂಭಿಕ ಆಟಗಾರ ಕೆ.ಎಲ್‌.ರಾಹುಲ್‌ ಏಳನೇ ಕ್ರಮಾಂಕದಲ್ಲಿ ಸ್ಥಿರವಾಗಿದ್ದಾರೆ.

ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 10ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಈ ವಿಭಾಗದಲ್ಲಿ ಇಂಗ್ಲೆಂಡ್‌ ನ ಡೇವಿಡ್ ಮಲಾನ್‌ ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಆಯರನ್ ಫಿಂಚ್‌ ಎರಡನೇ ಕ್ರಮಾಂಕದಲ್ಲಿದ್ದಾರೆ.
ಟೆಸ್ಟ್ ಬ್ಯಾಟ್ಸ್‌ ಮನ್‌ ಗಳ ಪಟ್ಟಿಯಲ್ಲೂ ಕೊಹ್ಲಿ ಐದನೇ ಸ್ಥಾನ ಕಾಯ್ದುಕೊಂಡಿದ್ದಾರೆ. ರೋಹಿತ್ ಶರ್ಮಾ ಸ್ಥಾನ ಏಳನೆಯದ್ದು. ಈ ವಿಭಾಗದ ಮೊದಲ ಸ್ಥಾನ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಅವರದ್ದಾಗಿದೆ.

ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಟೆಸ್ಟ್ ಬೌಲರ್‌ ಗಳ ವಿಭಾಗದಲ್ಲಿ ಅಗ್ರಸ್ಥಾನದಲ್ಲಿದ್ದರೆ, ಭಾರತದ ಆರ್‌.ಅಶ್ವಿನ್‌ ಎರಡನೇ ಸ್ಥಾನದಲ್ಲಿದ್ದಾರೆ.
ರವೀಂದ್ರ ಜಡೇಜ ಅವರು ಟೆಸ್ಟ್ ಆಲ್‌ರೌಂಡರ್‌ ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಅಶ್ವಿನ್ ಸ್ಥಾನ ನಾಲ್ಕನೆಯದ್ದು. ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಇದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: