ಕರ್ನಾಟಕಪ್ರಮುಖ ಸುದ್ದಿ

ಕೋವಿಡ್ ಲಸಿಕೆಯ 2ನೇ ಡೋಸ್ ಪಡೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು,ಏ.29-ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡರು.

ಇಂದು ಬೆಳಿಗ್ಗೆ 11 ಗಂಟೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ಪಡೆದುಕೊಂಡರು. ಮಾರ್ಚ್ 15 ರಂದು ಲಸಿಕೆಯ ಮೊದಲ ಡೋಸ್ ಅನ್ನು ಪಡೆದುಕೊಂಡಿದ್ದರು.

ಸಿದ್ದರಾಮಯ್ಯ ಅವರಿಗೂ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇದಾದ ಬಳಿಕ ಸಾಕಷ್ಟು ಎಚ್ಚರಿಕೆಯನ್ನು ವಹಿಸುತ್ತಿದ್ದಾರೆ.

ಕೋವಿಡ್‌ ಲಸಿಕೆಯನ್ನು ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ನಿನ್ನೆಯಿಂದ ಆನ್‌ಲೈನ್ ಮೂಲಕ ನೋಂದಣಿ ಕಾರ್ಯ ಆರಂಭಗೊಂಡಿದ್ದು, ಸುಮಾರು 70 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಲಸಿಕೆ ಅಭಾವವೂ ತಲೆದೋರಿದೆ. ಒಂದನೇ ಡೋಸ್‌ ಪಡೆದುಕೊಂಡ ವ್ಯಕ್ತಿಗಳಿಗೆ ಎರಡನೇ ಡೋಸ್ ಲಸಿಕೆ ಇನ್ನೂ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. (ಎಂ.ಎನ್)

 

Leave a Reply

comments

Related Articles

error: