ಮೈಸೂರು

ಪಿಹೆಚ್ ಸಿ ವೈದ್ಯರು,ಆಶಾ,ಅಂಗನವಾಡಿ ಕಾರ್ಯಕರ್ತರು ಜನರಿಗೆ ಧೈರ್ಯ ತುಂಬಬೇಕು : ಶಾಸಕ ಜಿ.ಟಿ.ದೇವೇಗೌಡ

ಮೈಸೂರು, ಏ, 29: – ಕೋವಿಡ್ ಪ್ರಕರಣದಿಂದ ಜನರ ಆತಂಕಕ್ಕೆ ಒಳಗಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಳ್ಳಿಗಳಲ್ಲಿ ಮನೆ ಮನೆಗೆ ಹೋಗಿ ಪರಿಶೀಲಿಸಬೇಕು‌. ಜನರಿಗೆ ಧೈರ್ಯ ತುಂಬ ಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೋವಿಡ್ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕೆಲವು ಹಳ್ಳಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದ್ದು, ಅಂತಹ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಗಳನ್ನಾಗಿ ಮಾಡಬೇಕು ಎಂದು ಸೂಚಿಸಿದರು.

ಉಸ್ತುವಾರಿ ಸಚಿವರು ಕ್ರಿಯಾಶೀಲರಾದ್ದರಿಂದ ಜಿಲ್ಲೆಯಲ್ಲಿ ಕೋವಿಡ್ ಸಮರ್ಪಕ ನಿರ್ವಹಣೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ಕ್ರಿಯಾಶೀಲರಾಗಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸಮರ್ಪಕವಾಗಿ ಆಗುತ್ತಿದೆ ಎಂದರು.

ಪ್ರತಿಯೊಂದು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಚತೆ ಕಾಪಾಡಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾದಾಗ ಮಾತ್ರ ಪ್ರಸ್ತುತ ಕೋವಿಡ್ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ತಡೆಗಟ್ಟಲು ಸಾಧ್ಯ ಎಂದರು.

ಮೈಸೂರು ತಾಲ್ಲೂಕಿನಲ್ಲಿ 643 ಸಕ್ರಿಯ ಪ್ರಕರಣಗಳಿವೆ, ನೆನ್ನೆ 116 ಹೊಸ ಪ್ರಕರಣ. 2000 ಜನ ಕ್ವಾರಂಟೈನ್‌ನಲ್ಲಿ ಇದ್ದು, 150 ಜನ ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ. ಹಂಚ್ಯಾ ಮತ್ತು ಸೋಲಿಗರ ಕಾಲೋನಿಯನ್ನು ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಲಾಗಿದೆ ಎಂದು ತಹಶೀಲ್ದಾರ್ ರಕ್ಷಿತ್ ಮಾಹಿತಿ ನೀಡಿದರು.

ಸಂಸದ ಪ್ರತಾಪ್ ಸಿಂಹ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿಗಳಾದ ರೋಹಿಣಿ ಸಿಂಧೂರಿ, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್, ಜಿಲ್ಲಾ ಪಂಚಾಯತಿಯ ಸಿ.ಇ.ಓ ಎ.ಎಂ. ಯೋಗೀಶ್, ಉಪವಿಭಾಗಾಧಿಕಾರಿ ಡಾ. ವೆಂಕಟರಾಜು, ತಾ.ಪ. ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಸೇರಿದಂತೆ ಇನ್ನಿತರು ಸಭೆಯಲ್ಲಿ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: